ದೇಗುಲಗಳಲ್ಲಿ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಆದೇಶ

0
6

ಬೆಂಗಳೂರು: ಬೇಸಿಗೆ ಸಂದರ್ಭದಲ್ಲಿ ರಾಜ್ಯದ ವಿವಿಧ ದೇಗುಲಗಳಿಗೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿ ರಾಜ್ಯ ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸಚಿವ ರಾಮಲಿಂಗಾರೆಡ್ಡಿ ಅವರ ನಿರ್ದೇಶನದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಿರುವ ಮುಜರಾಯಿ ಆಯುಕ್ತರು, ರಾಜ್ಯದ ದೇವಾಲಯಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಪೆಂಡಾಲ್ ಹಾಕಬೇಕು, ಕುಡಿಯುವ ನೀರಿನ ವ್ಯವಸ್ಥೆ ಸಹಿತ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ, ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಹಾಗೂ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಸೂಚಿಸಿದ್ದಾರೆ.
ಸುತ್ತೋಲೆಯಲ್ಲಿ ಏನಿದೆ: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಬಹುತೇಕ ಪ್ರಮುಖ ಅಧಿಸೂಚಿತ ದೇವಾಲಯಗಳಲ್ಲಿ ಬೇಸಿಗೆ ಕಾಲದ ಸಂದರ್ಭ ರೂಢಿ ಮತ್ತು ಸಂಪ್ರದಾಯಗಳು ಬಹಳ ಹಿಂದಿನಿಂದಲೂ ಜಾರಿಯಲ್ಲಿವೆ. ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಂತಹ `ಶಕ್ತಿ ಯೋಜನೆ’ಯನ್ನು ಜಾರಿಗೆ ತಂದಿರುವುದು ಹಾಗೂ ಈ ಸಮಯಗಳಲ್ಲಿ ಶಾಲೆ ಮತ್ತು ಕಾಲೇಜುಗಳ ರಜೆಯಿಂದಾಗಿ ದೂರದ ಊರುಗಳಿಂದ, ಜಿಲ್ಲೆಗಳಿಂದ ಹಾಗೂ ಇತರೆ ರಾಜ್ಯಗಳಿಂದ ಮಾತ್ರವಲ್ಲದೇ ವಿದೇಶಗಳಿಂದಲೂ ಸಹ ಭಕ್ತಾದಿಗಳು ಮತ್ತು ಯಾತ್ರಾರ್ಥಿಗಳು ದೇವಾಲಯಗಳಿಗೆ ಭೇಟಿ ನೀಡುವುದು ಗಮನಾರ್ಹವಾಗಿದೆ.

Previous articleಕ್ಯಾನ್ಸರ್‌ನಿಂದ ಪಾರಾದ ಇಸ್ರೋ ಅಧ್ಯಕ್ಷರು
Next articleಇಡೀ ಭಾರತವೇ ನನ್ನ ಕುಟುಂಬ