ದೇವರ ಜತೆ ಮೋದಿಯನ್ನು ಚರ್ಚೆಗೆ ಬಿಟ್ಟರೆ : ರಾಹುಲ್ ವ್ಯಂಗ್ಯ

0
8

ವಾಷಿಂಗ್ಟನ್: ಬಿಜೆಪಿಗರು ವಿಜ್ಞಾನಿಗಳಿಗೆ ವಿಜ್ಞಾನವನ್ನು ವಿವರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವ್ಯಂಗ್ಯವಾಡಿದ್ದಾರೆ. ಬುಧವಾರ ಸ್ಯಾನ್ ಫ್ರಾನ್ಸಿಸ್ಕೋದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ದೇವರೊಂದಿಗೆ ಚರ್ಚೆಗೆ ಕೂರಿಸಿದರೆ, ಅವರು ಬ್ರಹ್ಮಾಂಡ ಕಾರ್ಯನಿರ್ವಹಿಸುವ ಬಗ್ಗೆ ಮಾಡುವ ವಿವರಣೆಗೆ ದೇವರು ನಾನೇನು ಸೃಷ್ಠಿ ಮಾಡಿದ್ದೇನೆ ಎಂಬ ಗೊಂದಲಕ್ಕೊಳಗಾಗುತ್ತಾನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವ್ಯಂಗ್ಯವಾಡಿದ್ದಾರೆ. ಬಿಜೆಪಿಗರು ವಿಜ್ಞಾನಿಗಳಿಗೆ ವಿಜ್ಞಾನವನ್ನು ವಿವರಿಸುತ್ತಾರೆ. ಇತಿಹಾಸಕಾರರಿಗೆ ಇತಿಹಾಸವನ್ನು ವಿವರಿಸುತ್ತಾರೆ. ಅಲ್ಲದೆ ಸೈನ್ಯ ಹಾಗೂ ವಾಯುಪಡೆಗೂ ಪಾಠ ಮಾಡಲು ಹೋಗುತ್ತಾರೆ. ಆದರೆ ಅವರಿಗೆ ಅದ್ಯಾವುದರ ಬಗ್ಗೆಯೂ ತಿಳುವಳಿಕೆ ಇಲ್ಲ ಎಂದು ಕುಟುಕಿದ್ದಾರೆ.

Previous articleಗ್ಯಾರಂಟಿಗಾಗಿ ಶುಕ್ರವಾರ ಸಚಿವ ಸಂಪುಟ ಸಭೆ
Next articleರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ