ದೇವಾಲಯ ತೆರವು ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

0
22

ರಾಯಚೂರ:ಸಿ.ಎ. ಸೈಟ್ ನಲ್ಲಿ ನಿರ್ಮಿಸಿದ ಶಿವ ಹಾಗೂ ಗಣೇಶ ದೇವಾಲಯಗಳನ್ನು ಜಿಲ್ಲಾಡಳಿತ ಹಾಗೂ ನಗರಸಭೆ ನೇತೃತ್ವದಲ್ಲಿ ತೆರವು ಕಾರ್ಯಚರಣೆ ಕ್ರಮ ಖಂಡಿಸಿ, ಬಿಜೆಪಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ನಗರದ ಶಾಸಕ ಡಾ.ಶಿವರಾಜ ಪಾಟೀಲ್ ನೇತೃತ್ವದಲ್ಲಿ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದ ಘಟನೆ ಬುಧವಾರ ನಡೆದಿದೆ.
ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಪ್ರತಿಭಟನಾಕಾರರು ಪಟ್ಟು ಬಿಡದ ಹಿನ್ನೆಲೆಯಲ್ಲಿ ನಗರದ ಶಾಸಕ ಡಾ.ಶಿವರಾಜ ಪಾಟೀಲ್ ಸೇರಿದಂತೆ ಪ್ರತಿಭಟನಾಕಾರರು ಬಂಧಿಸಿದ ಪೊಲೀಸರು ವಾಹನಗಳನ್ನು ಕರೆದುಕೊಂಡು ಹೋಗಿ ನಂತರ ಬಿಡುಗಡೆಗೊಳಿಸಿದರು.

Previous articleವಿಕ್ರಂ ಗೌಡ ಹತ್ಯೆ: ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್ಕೌಂಟರ್
Next articleಏನು‌ ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ