ಬೆಂಗಳೂರು: ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡ್ತಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸಿಪಿವೈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ದೇವೇಗೌಡರ ವಯಸ್ಸು 92, ದೇಶ, ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಅಂತ ಅನೇಕ ವೇಳೆ ಪ್ರಧಾನಿಯವರೇ ಹೇಳಿದ್ದಾರೆ. ಎಂದಿಗೂ ದೇವೇಗೌಡರು ಅಧಿಕಾರದ ದಾಹಕ್ಕೆ ಅಧಿಕಾರಕ್ಕೆ ಅಂಟಿಕೊಂಡು ರಾಜಕಾರಣ ಮಾಡಿಲ್ಲ ಎಂದರು.