ಬೆಂಗಳೂರು: ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ರಾಜ್ಯದಲ್ಲಿ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿದ್ದು RT-PCR ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ರಾಜ್ಯದಲ್ಲಿ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಲ್ಲಿ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗಾಗಿ ಮಾದರಿಯನ್ನು ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸಲು ತಿಳಿಸಲಾಗಿದೆ.
- ಎಲ್ಲಾ SARI ಪಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
- ವಯೋವೃದ್ಧರಲ್ಲಿ, ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
- ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು.
ದೇಶದಲ್ಲಿ 1,000 ಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳಿದ್ದು, ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಅತಿ ಹೆಚ್ಚು ಸೋಂಕುಗಳು ಇವೆ ಎಂದು ಸರ್ಕಾರ ಸೋಮವಾರ ತಿಳಿಸಿದೆ. ಇಂದು ಬೆಳಗಿನ ಕೇಂದ್ರ ಆರೋಗ್ಯ ಸಚಿವಾಲಯದ ಕೋವಿಡ್ -19 ಪೋರ್ಟಲ್ ಪ್ರಕಾರ, ಭಾರತದಲ್ಲಿ 1,009 ಸಕ್ರಿಯ ಪ್ರಕರಣಗಳಿದ್ದು. ಇವುಗಳಲ್ಲಿ 752 ಇತ್ತೀಚಿನ ಪ್ರಕರಣಗಳಾಗಿವೆ.ಕೇರಳದಲ್ಲಿ ಅತಿ ಹೆಚ್ಚು ಸಕ್ರಿಯ ಪ್ರಕರಣಗಳು 430, ನಂತರ ಮಹಾರಾಷ್ಟ್ರದಲ್ಲಿ 209, ದೆಹಲಿಯಲ್ಲಿ 104 ಮತ್ತು ಕರ್ನಾಟಕದಲ್ಲಿ 47 ಇವೆ. ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಂತಹ ಕೆಲವು ರಾಜ್ಯಗಳಲ್ಲಿ ಪ್ರಸ್ತುತ ಯಾವುದೇ ಸಕ್ರಿಯ ಪ್ರಕರಣಗಳು ವರದಿಯಾಗಿಲ್ಲ ಎಂದು ತಿಳಿಸಿದೆ.