ದೇಶದೊಳಗೆ ಎಲ್ಲಾ ರಾಜ್ಯಗಳಿಗೂ ಒಂದೇ ಕಾನೂನು

0
5

ನವದೆಹಲಿ: ದೇಶದೊಳಗೆ ಎಲ್ಲಾ ರಾಜ್ಯಗಳಿಗೂ ಒಂದೇ ಕಾನೂನು ಇರಬೇಕೆಂಬ ನಮ್ಮ ನಿಲುವಿಗೆ ನ್ಯಾಯಾಲಯ ಸಮ್ಮತಿ ಸೂಚಿಸಿದ್ದು ಸಂತಸದ ವಿಷಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಕಾನೂನನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರದ್ದುಗೊಳಿಸಿದ್ದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ಕೇಂದ್ರ ಸರಕಾರದ ಮಹತ್ವದ ನಿರ್ಧಾರಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ದೇಶದೊಳಗೆ ಎಲ್ಲಾ ರಾಜ್ಯಗಳಿಗೂ ಒಂದೇ ಕಾನೂನು ಇರಬೇಕೆಂಬ ನಮ್ಮ ನಿಲುವಿಗೆ ನ್ಯಾಯಾಲಯ ಸಮ್ಮತಿ ಸೂಚಿಸಿದ್ದು ಸಂತಸದ ವಿಷಯ ಎಂದು ಬರೆದುಕೊಂಡಿದ್ದಾರೆ.

Previous articleಪ್ರಗತಿ ಮತ್ತು ಏಕತೆಯ ಪ್ರತಿಧ್ವನಿಸುವ ಘೋಷಣೆ
Next articleಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ