ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು ನೀಡಲಿದ್ದು, ರಾಮೇಶ್ವರಂಗೆ ತೆರಳುವ ಭಕ್ತರಿಗೆ ಹೆಚ್ಚು ಅನುಕೂಲವಾಗಲಿದೆ.
ಚೆನ್ನೈ: ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಅನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ರೈಲು ಸೇತುವೆಯನ್ನ 111 ವರ್ಷಗಳ ಹಿಂದೆ ಇಲ್ಲಿ ನಿರ್ಮಿಸಿದ್ದು, ಹಳೆಯ ಸೇತುವೆ ಶಿಥಿಲಗೊಂಡಿದ್ದರಿಂದ ಪಕ್ಕದಲ್ಲಿಯೇ ಹೊಸ ಸೇತುವೆ ನಿರ್ಮಿಸಲಾಗಿದೆ. ಹಳೇ ಬ್ರಿಡ್ಜ್ ಮಾನವ ಸಹಿತವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಈ ನೂತನ ಬ್ರಿಡ್ಜ್ ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತೆ. ಇದು ಎಲೆಕ್ಟ್ರಿಕಲ್ ಆಟೋಮೆಕ್ಯಾನಿಕಲ್ ತಂತ್ರಜ್ಞಾನ ಒಳಗೊಂಡಿದೆ. ಹಳೇ ಬ್ರಿಡ್ಜ್ ತೆರೆದುಕೊಳ್ಳಲು 45 ನಿಮಿಷ ಕಾಲಾವಕಾಶ ತೆಗೆದುಕೊಳ್ಳುತ್ತಿತ್ತು. ಆದರೆ ಹೊಸ ಬ್ರಿಡ್ಜ್ 5.3 ನಿಮಿಷದಲ್ಲಿ ತೆರೆದುಕೊಳ್ಳಲಿದೆ. ಸುಮಾರು 2.5 ಕಿಲೋ ಮೀಟರ್ ಉದ್ದದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ರೈಲು ಸೇತುವೆ ಇದಾಗಿದ್ದು, ಭವಿಷ್ಯಕ್ಕೆ ಸಿದ್ಧವಾಗುವಂತೆ ವಿನ್ಯಾಸಗೊಳಿಸಲಾದ ಈ ಸೇತುವೆಯು ಸ್ಟೇನ್‌ಲೆಸ್ ಸ್ಟೀಲ್ ಬಲವರ್ಧನೆಗಳು, ಉನ್ನತ ದರ್ಜೆಯ ರಕ್ಷಣಾತಕ ಬಣ್ಣ ಮತ್ತು ವರ್ಧಿತ ಬಾಳಿಕೆ ಮತ್ತು ಕಡಿಮೆ ನಿರ್ವಹಣೆಗಾಗಿ ಸಂಪೂರ್ಣವಾಗಿ ಬೆಸುಗೆ ಹಾಕಿದ ಕೀಲುಗಳನ್ನು ಒಳಗೊಂಡಿದೆ.
https://www.facebook.com/share/v/17rjVHWVfX