ಸಂ. ಕ. ಸಮಾಚಾರ, ಮಂಗಳೂರು: ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಮಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ ಶೀಟರ್ ಗಳ ಚಲನವಲನಗಳ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇತರ ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು. ಸಾರ್ವಜನಿಕರು ನೇರವಾಗಿ ಮೊಬೈಲ್ ಸಂಖ್ಯೆ ೯೪೮೦೮೦೫೩೦೧ ಅಥವಾ ಕಚೇರಿ ಸಂಖ್ಯೆ ೦೮೨೪ ೨೨೨೦೫೦೩ಗೆ ಮಾಹಿತಿ ನೀಡಬಹುದು ಎಂದಿದ್ದಾರೆ.