Home News ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದ ಬಸ್: ಇಬ್ಬರ ಸಾವು

ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದ ಬಸ್: ಇಬ್ಬರ ಸಾವು

ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ

ಹಾಸನ: ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಶಿವರಾತ್ರಿ ಆಚರಿಸಲು ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹಾಸನದ ಹೊರವಲಯದವ ಕೆಂಚಟ್ಟಳ್ಳಿ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದೆ, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕು, ಅನಗೊಳ ಗ್ರಾಮದ ಸುರೇಶ್ (60), ಮತ್ತು ಕುಮಾರ (55) ಎಂಬವರು ಮೃತರು. ಗಂಭಿರವಾಗಿ ಗಾಯಗೊಂಡಿರುವ ಒಬ್ಬರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಖಾಸಗಿ ಬಸ್ ಪಾದಾಯಾತ್ರಿಗಳ ಮೇಲೆ ಹರಿದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Exit mobile version