ಧಾರವಾಡದಲ್ಲಿ ೧ ಕೋವಿಡ್ ಸಕ್ರಿಯ ಪ್ರಕರಣ ದಾಖಲು

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಒಂದು ಕೋವಿಡ್ ಸಕ್ರಿಯ ಪ್ರಕರಣ ದಾಖಲಾಗಿದೆ.

ಕೋವಿಡ್ ಲಕ್ಷಣಗಳನ್ನು ಹೊಂದಿದ ನಗರದ ೭೩ ವರ್ಷದ ಮಹಿಳೆಯನ್ನು ಪರೀಕ್ಷಿಸಿದಾಗ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಕೂಡಲೇ ಮಹಿಳೆಯನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಹಿಳೆ ಆರೋಗ್ಯ ಸ್ಥಿರವಾಗಿದ್ದು, ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟನೆ ತಿಳಿಸಿದೆ.