ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ದಿವ್ಯಪ್ರಭು ಜಿ.ಆರ್.ಜೆ. ಅಧಿಕಾರ ಸ್ವೀಕರಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಬೆಂಗಳೂರಿಗೆ ವರ್ಗಾವಣೆ ಆಗಿದ್ದು, ಅವರ ಸ್ಥಳಕ್ಕೆ ಹಿರಿಯ ಐಎಎಸ್ ಅಧಿಕಾರಿ ದಿವ್ಯಪ್ರಭು ಜೆ.ಆರ್.ಜಿ. ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ತಮಿಳುನಾಡು ಮೂಲದ ದಿವ್ಯಪ್ರಭು ಅವರು ೨೦೧೪ನೇ ಸಾಲಿನ ಐ.ಎ.ಎಸ್. ಬ್ಯಾಚ್ ಅಧಿಕಾರಿ ಆಗಿದ್ದು, ಈಗಾಗಲೇ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿರುವ ಇವರು, ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರಾಗಿ, ಮಂಡ್ಯ ಜಿಪಂ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ದಿವ್ಯಪ್ರಭು ಅವರು, ಸರಕಾರದ ಆದೇಶದಂತೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.