ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ: ಮಾಜಿ ಸಂಸದ ಮಂಜುನಾಥ ಕುನ್ನೂರ

0
8

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ‌ ಸಂಸದ ಮಂಜುನಾಥ ಕುನ್ನೂರ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಯಾವುದೇ ಜನಪರ ಅಭಿವೃದ್ಧಿ ಕಾರ್ಯ ಅಗುತ್ತಿಲ್ಲ. ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರದ ಟಿಕೇಟ್‌ಗಾಗಿ ಅರ್ಜಿ ಹಾಕಿದ್ದೆನು. ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ. ಈ ಭಾಗದ ಸಂಸದರು‌ ನ್ಯಾಯ ಒದಗಿಸಿಲ್ಲ. ಹಿತೈಷಿಗಳು ಹಾಗೂ ಸ್ನೇಹಿತರು ತಾವು ಸ್ವತಂತ್ರವಾಗಿ ಸ್ಪರ್ಧಿಸಬೇಕೆಂದು ಒತ್ತಡ ಹೇರುತ್ತಿದ್ದಾರೆ. ಕುಟುಂಬ ರಾಜಕಾರಣ ಮಿತಿಮೀರಿದೆ. ಹಣಬಲ, ತೋಳ್ಬಲ ಹಾಗೂ ಪ್ರಭಾವ ರಾಜಕಾರಣ ಸಹ ಮಿತಿಮೀರಿದೆ. ಹೊಂದಾಣಿಕೆ ರಾಜಕಾರಣ ಸಹ ಚುನಾವಣೆಗಳಲ್ಲಿ ಹೆಚ್ಚಿದೆ. ಮನನೊಂದು ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆಂದು ತೀರ್ಮಾನಿಸಿದ್ದೇನೆ ಎಂದರು.

Previous articleಶಾಸಕರೊಂದಿಗೆ ಅಸಭ್ಯ ವರ್ತನೆ: ಪ್ರಕರಣ ದಾಖಲು
Next articleಗೋವಿಂದ ಕಾರಜೋಳ ವಿನಾಮಪತ್ರ ಸಲ್ಲಿಕೆ