ನಂದಿನಿ ಬ್ರ್ಯಾಂಡ್‌ನ್ನು ಸರ್ವನಾಶ ಮಾಡಲು ಶಪಥ ಮಾಡಿದಂತಿದೆ…

0
33

ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ನಂದಿನಿ ಬ್ರ್ಯಾಂಡ್ ಅನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ.
ಈ ಕುರಿತಂತೆ ಸಾಮಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಒಂದು ಕಡೆ ಹಾಲು ಉತ್ಪಾದಕರಿಗೆ ನೂರಾರು ಕೋಟಿ ಬಾಕಿ ಉಳಿಸಿಕೊಂಡಿದೆ. ಮತ್ತೊಂದು ಕಡೆ ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ ನಂದಿನಿ ಬ್ರ್ಯಾಂಡ್‌ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್‌ ಎಂಡಿ ಎಂ.ಕೆ.ಜಗದೀಶ್ ಅವರನ್ನ ದಿಢೀರನೆ ವರ್ಗಾವಣೆ ಮಾಡಿತ್ತು. ಈಗ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಡೈರಿ ಮಳಿಗೆಗಳನ್ನು ಸ್ಥಾಪಿಸಲು ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಲೂ ಆಸಕ್ತಿ ತೋರಿಲ್ಲ. ನಮ್ಮ ನಾಡಿನ ರೈತರು, ನಿಷ್ಠಾವಂತ ಗ್ರಾಹಕರು ಕಷ್ಟಪಟ್ಟು ಕಟ್ಟಿರುವ ನಂದಿನಿ ಬ್ರ್ಯಾಂಡ್ ಅನ್ನ ಸರ್ವನಾಶ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಶಪಥ ಮಾಡಿದಂತಿದೆ ಎಂದಿದ್ದಾರೆ

Previous articleKPTCL: 35 ಸಾವಿರ ಹುದ್ದೆಗಳು ಶೀಘ್ರ ಭರ್ತಿ
Next articleವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 2000 ಅಭ್ಯರ್ಥಿಗಳ ನೇಮಕಾತಿಗೆ ಆಗ್ರಹ