ನಂದಿನಿ ಹಾಲಿನ ದರ ಮತ್ತೆ ಏರಿಕೆ

0
27

ನಂದಿನಿ ಹಾಲು ಮತ್ತಷ್ಟು ದುಬಾರಿ,

ಬೆಂಗಳೂರು : ನಂದಿನಿ ಹಾಲಿನ ಪ್ರತಿ ಲೀಟರ್‌ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ನಾಳೆಯಿಂದಲೇ (ಮಾ.28) ಪರಿಷ್ಕೃತ ದರ ಜಾರಿಯಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಏರಿಕೆ ಕುರಿತು ಮುಂದಿಟ್ಟ ಪ್ರಸ್ತಾವನೆಗೆ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಪ್ರತಿ ಲೀಟರ್ ಹಾಲಿಗೆ 4 ರೂ. ಗಳನ್ನು ಹೆಚ್ಚಿಸಿದೆ. ಈ ಕುರಿತು ಮಾ.24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರಕಾರಿ ನಿವಾಸ ಕಾವೇರಿಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಅಧ್ಯಕ್ಷ, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ್ದರು. ಇದೀಗ ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು 4 ರೂ. ಗೆ ಹೆಚ್ಚಳ ಮಾಡಲಾಗಿದೆ.

Previous articleಯತ್ನಾಳ ಏಕಾಂಗಿಯಲ್ಲ: ನಾಳೆ ಬೆಂಗಳೂರಲ್ಲಿ ಭಿನ್ನಮತೀಯರ ಸಭೆ
Next articleಅಕ್ರಮ ಗೋ ಸಾಗಾಟಗಾರರ ಹೆಡೆಮುರಿ ಕಟ್ಟಿ