ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಕೇಸ್ನಲ್ಲಿ ಇಂದು ಬೆಳಗ್ಗೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ನಂತರ ಪೊಲೀಸ್ರು ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ನಾಂಪಲ್ಲಿ ಕೋರ್ಟ್ನಲ್ಲಿ ಹಾಜರುಪಡಿಸಿದ್ರು. ಕೋರ್ಟ್ ಈಗ ಮಹತ್ವದ ಆದೇಶ ಹೊರಡಿಸಿದ್ದು, 14 ದಿನಗಳ ಕಾಲ ಅಲ್ಲು ಅರ್ಜುನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಅಲ್ಲು ಅರ್ಜುನ್ ಅವರಿಗೆ ನ್ಯಾಯಾಂಗ ಬಂಧನ ನೀಡಿರುವುದು ಕೆಳ ಹಂತದ ಕೋರ್ಟ್. ಅವರು ಈಗಾಗಲೇ ತಮ್ಮ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಒಂದೊಮ್ಮೆ ಹೈಕೋರ್ಟ್ ಈ ಪ್ರಕರಣಕ್ಕೆ ತಡೆ ನೀಡಿದರೆ ಅಲ್ಲು ಅರ್ಜುನ್ ಅವರಿಗೆ ಬಿಗ್ ರಿಲೀಫ್ ಸಿಗಲಿದೆ.