ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 14ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಜಾಮೀನು ಅರ್ಜಿ ವಿಚಾರಣೆಯಲ್ಲಿ ವಕೀಲರ ವಾದ ಅಂತ್ಯವಾಗಿದ್ದು, ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 14 ರಂದು ನ್ಯಾಯಾಧೀಶರು ಹೊರಡಿಸಲಿದ್ದಾರೆ.
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು 57ನೇ ಸಿಸಿ ಎಚ್ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್ ಅವರು, ಸುದೀರ್ಘ ವಾದ ಪ್ರತಿವಾದ ಆಲಿಸಿ ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ. ಸೋಮವಾರ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.