ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

0
6

ಬೆಂಗಳೂರು : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿದೆ.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಸುದೀರ್ಘ ವಾದ ಮಂಡಿಸಿದ್ದು ವಾದ ಮಂಡನೆ ಮುಕ್ತಾಯವಾಗಿದೆ. ಈ ಮಧ್ಯೆ ವಿಚಾರಣೆಯನ್ನ 57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿದ್ದಾರೆ. ಅಕ್ಟೋಬರ್ 8 ರಂದು ಎಸ್ ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಲಿದ್ದಾರೆ.

Previous articleಶಾಲಾ ಶಿಕ್ಷಣ ಇಲಾಖೆಗೆ ಹೊಸ ಆಯುಕ್ತರ ನೇಮಕ
Next articleವಿವಿಧ ಬೇಡಿಕೆ ಈಡೇರಿಕೆಗೆ ಎಡಿಸಿಗೆ ವಾಲ್ಮೀಕಿ ಸಮಾಜದ ಮನವಿ