ನಟ ಮುರಳಿ ಬಂಧನ

0
21

ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ನಿನ್ನೆ ರಾತ್ರಿ ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಪೋಸಾನಿ ಕೃಷ್ಣ ಅವರು ಕಾನೂನು ಸಂಕಷ್ಟ ಎದುರಿಸುತ್ತಿರುವುದು ಇದೇ ಮೊದಲೇನಲ್ಲ. 2024ರ ನವೆಂಬರ್‌ನಲ್ಲಿ ಸಿಎಂ ಚಂದ್ರಬಾಬು ನಾಯ್ಡು ವಿರದ್ಧವೂ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಆಗಲೂ ತಮ್ಮವಿರುದ್ಧ ಕೇಸ್ ದಾಖಲಾಗಿತ್ತು. ಸಮುದಾಯವೊಂದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕುರಿತು ಪೋಸಾನಿ ಕೃಷ್ಣ ಮುರಳಿ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಟನನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ. ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.

Previous article
Next articleಕಲ್ಯಾಣ ಕರ್ನಾಟಕ ವಿಷಯದಲ್ಲಿ ಮೌನವಾಗಿರುವುದೇಕೆ?