ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಟ ಶಿವರಾಜ್‌ಕುಮಾರ್ ಅವರನ್ನು ಭೇಟಿಯಾಗಿ ಆರೋಗ್ಯ ಕ್ಷೇಮ ವಿಚಾರಿಸಿದ್ದಾರೆ.
ನಟ ಶಿವರಾಜ್‌ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ ನಂತೆ ಇಂದು ಅವರು ಅವರ ಆರೋಗ್ಯವನ್ನು ವಿಚಾರಿಸಿಲು ಶಿವರಾಜ ಕುಮಾರ್ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ. ಈ ಹಿಂದೆ ಶಿವಣ್ಣ ಸರ್ಜರಿಗೆ ಒಳಗಾದ ಸಂದರ್ಭದಲ್ಲಿಯೂ ಡಿ.ಕೆ.ಶಿವಕುಮಾರ್ ಅವರು ಪ್ರಾರ್ಥಿಸಿದ್ದರು. ಶಿವರಾಜ್‌ಕುಮಾರ್ ಅವರ ಆರೋಗ್ಯ ಸುಧಾರಿಸಲಿ ಎಂದು ಸಾಮಾಜಿಕ ಜಾಲತಾಣದ ಶುಭ ಹಾರೈಸಿದ್ದ ಅವರು. ನೆಚ್ಚಿನ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಅವರು ಶೀಘ್ರವೇ ಗುಣಮುಖರಾಗಲಿ ಎಂದು ಭಗವಂತನನ್ನು ಪ್ರಾರ್ಥಿಸುತ್ತೇನೆ ಎಂದಿದ್ದರು. ನನ್ನ ನೆರೆಹೊರೆಯವರೇ ಆದ ಶಿವರಾಜ್ ಕುಮಾರ್ ಅವರು ಗಂಭೀರ ಕಾಯಿಲೆಗೆ ಒಳಗಾಗಿದ್ದಾರೆ ಎಂದು ತಿಳಿದು ದುಃಖವಾಯಿತು. ಆದರೆ, ಅವರ ಜೀವನೋತ್ಸಾಹ, ಎಲ್ಲವನ್ನೂ ಗೆಲ್ಲಬಲ್ಲೆನು ಎನ್ನುವ ಧೈರ್ಯ ನಿಜಕ್ಕೂ ಎಲ್ಲರಿಗೂ ಸ್ಫೂರ್ತಿದಾಯಕ. ಭಗವಂತ ಅವರಿಗೆ ಇನ್ನಷ್ಟು ಚೈತನ್ಯ ನೀಡಿ ಕಾಪಾಡಲಿ ಎಂದು ಡಿ.ಕೆ.ಶಿವಕುಮಾರ್ ಹಾರೈಸಿದ್ದರು.