ಬೆಳಗಾವಿ: ಯುವಕನನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹಿಲ್ ಗಾರ್ಡನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಪರಶುರಾಮ್ ಗೊಂದಳಿ(25) ಹತ್ಯೆಯಾದ ಯುವಕ, ಪರಶುರಾಮ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಗೊಂದಳಿ ಗಲ್ಲಿ ನಿವಾಸಿಯಾಗಿದ್ದು. ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು,ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಗೋಕಾಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.