ವಾಷಿಂಗ್ಟನ್: ನನ್ನ DOGE ಅವಧಿ ಕೊನೆಯಾಗಿದೆ ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್ ಎಲೋನ್ ಮಸ್ಕ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ನನ್ನ DOGE ಅವಧಿ ಕೊನೆಯಾಗಿದೆ ಎಂದು ಘೋಷಿಸಿದರು. ಸರ್ಕಾರದ ವ್ಯರ್ಥ ಖರ್ಚುಗಳನ್ನು ಕಡಿಮೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ, ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ ಮುಂದೆ ಬಲಗೊಳ್ಳಲಿದ್ದು, ಸರ್ಕಾರದ ಕಾರ್ಯವಿಧಾನ ಭಾಗವಾಗಿದೆ ಎಂದಿದ್ದಾರೆ.