Home ತಾಜಾ ಸುದ್ದಿ ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ

ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ

0

ಬೆಳಗಾವಿ: ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವಾಗ ವಿರೋಧ ವ್ಯಕ್ತವಾಗುತ್ತದೋ, ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮನ್ನು ವಿರೋಧ ಮಾಡದೇ ಇದ್ದರೆ, ಶೋಭಾ ಒಳ್ಳೆಯ ‌ಕೆಲಸ ಮಾಡುತ್ತಿದ್ದಾರೆ.‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಾರೆ. ಒಂದು ವೇಳೆ ವಿರೋಧ ಮಾಡಿದರೆ, ಶೋಭಾರನ್ನು ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ಪಕ್ಷದ ನಾಯಕರು ಮಾಹಿತಿ ಕಲೆ ಹಾಕುತ್ತಾರೆ. ಆಗಲೇ ಸತ್ಯ ಗೊತ್ತಾಗುವುದು. ನಮ್ಮ ವ್ಯಕ್ತಿತ್ವವೇನು, ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತದೆ. ನಾವೇನು ಮಾಡಿಲ್ಲ, ಏನನ್ನು ಮಾಡಬಾರದು, ಎನ್ನುವುದು ಇಂತಹ ವರದಿ ಪಡೆಯುವುದರಿಂದ ತಿಳಿದು ಬರುತ್ತದೆ ಎಂದರು.

Exit mobile version