ನಮ್ಮ ಎದೆ ಬಗೆದರೆ ರಾಮ ಇದ್ದಾನೆ

0
23

ಬೆಂಗಳೂರು: ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಆಸ್ತಿ ಅಲ್ಲ. ನಮ್ಮ ಎದೆ ಬಗೆದರೆ ರಾಮ ಇದ್ದಾನೆ ಎಂದು ಶಾಸಕ ಪ್ರದೀಪ್ ಈಶ್ವರ್ ಅವರು ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗ್ಡೆ ನಾಲಿಗೆ ಹಿಡಿತದಲ್ಲಿ ಇರಲಿ. ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಆಸ್ತಿ ಅಲ್ಲ. ನಮ್ಮ ಎದೆ ಬಗೆದರೆ ರಾಮನೂ ಇದ್ದಾನೆ, ಸಿದ್ದರಾಮಯ್ಯ, ದೇವರಾಜ್ ಅರಸ್ ಕೂಡ ಇದ್ದಾರೆ. ನಮ್ಮ ಎದೆಯಲ್ಲಿ ಅಂಬೇಡ್ಕರ್, ಸಿದ್ದಗಂಗಾ ಶ್ರೀಗಳು ಕೂಡ ಇದ್ದಾರೆ. ನಿನ್ನ ರಕ್ತದಲ್ಲಿ ಮಾತ್ರ ಹಿಂದೂ ಇರೋದಾ, ನಿಮ್ಮ ಅಪ್ಪನ ಮನೆ ಆಸ್ತಿ ಥರಾ ಆಡೋದನ್ನ ನಿಲ್ಲಿಸಿ ಎಂದು ವಾಗ್ದಾಳಿ ನಡೆಸಿದರು.

Previous articleಅನಂತ್‌ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು
Next articleರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ