ನಮ್ಮ ಬದ್ಧತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ

0
15

ಬೆಂಗಳೂರು: ಭಾರತದ ಐಕ್ಯತೆ, ಅಖಂಡತೆ ಬಗ್ಗೆ ನಮ್ಮ ಬದ್ಧತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂಬ ಸಂಸದ ಡಿ ಕೆ ಸುರೇಶ್‌ ಮಾತಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಜನರ ಭಾವನೆ, ಬೇಸರ ಮತ್ತು ಅಭಿಪ್ರಾಯದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಅವರು ಕನ್ನಡಿ ಹಿಡಿದಿರುವುದನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ಭಾರತದ ಐಕ್ಯತೆ, ಅಖಂಡತೆ ಬಗ್ಗೆ ನಮ್ಮ ಬದ್ಧತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ. ನಾವೆಲ್ಲಾ ಭಾರತ ಮಾತೆಯ ಮಕ್ಕಳು. ಹೀಗಿರುವಾಗ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ ಎಂದಿದ್ದಾರೆ.

Previous articleಡಿ.ಕೆ. ಸುರೇಶ ಜವಾಬ್ದಾರಿ ಅರಿತು ಮಾತನಾಡಲಿ
Next articleಇಂದಿನಿಂದ ಹಂಪಿ ಉತ್ಸವ