ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಲ್ಲಿ ಪಾನ್ ಮಸಾಲಾ ಉಗುಳಿದ ವ್ಯಕ್ತಿಗೆ ದಂಡ ವಿಧಿಸಲಾಗಿದೆ ಎಂದು ನಮ್ಮ ಮೆಟ್ರೊ ತಿಳಿಸಿದೆ.
ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿರುವ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರ್ಮ್ 1 ರ ಲಿಫ್ಟ್ ಬಳಿ . ಮೇ-2 ರಂದು ಸಂಜೆ 6.30 ಕ್ಕೆ ಪ್ರಯಾಣಿಕನೊಬ್ಬ ಪಾನ್ ಉಗುಳುತ್ತಿದ್ದ ಪ್ರಯಾಣಿಕನನ್ನು ಪತ್ತೆ ಹಚ್ಚಿ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಮೆಟ್ರೋ ಆವರಣದಲ್ಲಿ ಉಗುಳುವುದು ಮತ್ತು ಕಸದಂಚುಗಳನ್ನು ಎಸೆಯುವುದು ಪರಿಸರ ಹಾಳಾಗುವುದಲ್ಲದೆ, ಇತರ ಪ್ರಯಾಣಿಕರ ಆರೋಗ್ಯಕ್ಕೂ ಅಪಾಯವನ್ನು ಉಂಟುಮಾಡುತ್ತದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸ್ವಚ್ಛ, ಆರೋಗ್ಯಕರ ಮತ್ತು ಸುರಕ್ಷಿತ ಸಾರ್ವಜನಿಕ ಸಾರಿಗೆಯ ವ್ಯವಸ್ಥೆಗಾಗಿ ಕಟಿಬದ್ಧವಾಗಿದೆ. ಸ್ವಚ್ಛತೆ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಪಯಾಣಿಕರು ಸಹಕರಿಸಿ, ಇಂತಹ ಘಟನೆಗಳು ಸಂಭವಿಸಿದರೆ ತಕ್ಷಣವೇ ಮೆಟ್ರೋ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದೆ.