Home ತಾಜಾ ಸುದ್ದಿ ನಮ್ಮ ಮೆಟ್ರೋ: ನಾಗಸಂದ್ರ-ಮಾದಾವರ ಮಾರ್ಗ ಸಂಚಾರ ಆರಂಭ

ನಮ್ಮ ಮೆಟ್ರೋ: ನಾಗಸಂದ್ರ-ಮಾದಾವರ ಮಾರ್ಗ ಸಂಚಾರ ಆರಂಭ

0

ಬೆಂಗಳೂರು: ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗವನ್ನು ಊಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಇಂದು ಪರಿಶೀಲನೆ ನಡೆಸಿದರು.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ನಾಗರಿಕರನ್ನು ಹೆಚ್ಚು ಕಾಯಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಈಗಲೇ ಹೊಸ ಮಾರ್ಗದ ಸೇವೆಯನ್ನು ಆರಂಭಿಸಲಾಗಿದ್ದು, ಸದ್ಯದಲ್ಲೇ ಅಧಿಕೃತವಾಗಿ ಉದ್ಘಾಟಿಸಲಾಗುವುದು. ಇಡೀ ದೇಶದಲ್ಲೇ ಅತಿ ಹೆಚ್ಚು ಮೆಟ್ರೋ ಪ್ರಯಾಣಿಕರನ್ನು ಬೆಂಗಳೂರು ಹೊಂದಿದೆ. ವಿಸ್ತರಿತ 3.14 ಕಿ.ಮೀ ಸೇರಿ ಬೆಂಗಳೂರು ಮೆಟ್ರೋ 76.95 ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಮೆಟ್ರೋ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ವರ್ಷಕ್ಕೆ ಇನ್ನೂ 30 ಕಿ.ಮೀ ಸೇರ್ಪಡೆಯಾಗಲಿದೆ. 2026ಕ್ಕೆ ಬೆಂಗಳೂರು ಮೆಟ್ರೋದ ಒಟ್ಟು ವ್ಯಾಪ್ತಿ 175 ಕಿ.ಮೀ ಆಗಲಿದೆ ಎಂದು ತಿಳಿಸಿದರು.

Exit mobile version