ನಮ್ಮ ಮೇಲೆ ದಾಳಿ ಮಾಡಿದರೆ ಸುಮ್ಮನೆ ಬಿಡುವುದಿಲ್ಲ…

0
33

ವಾಷಿಂಗ್ಟನ್‌: ʼಇರಾನ್ ಯಾವುದೇ ರೀತಿಯಲ್ಲಿ ಅಥವಾ ರೂಪದಲ್ಲಿ ಅಮೆರಿಕದ ಮೇಲೆ ದಾಳಿ ಮಾಡಿದರೆ, ಹಿಂದೆಂದೂ ನೋಡಿರದ ಮಟ್ಟದಲ್ಲಿ ಅಮೆರಿಕದ ಮಿಲಿಟರಿಯ ಶಕ್ತಿಯನ್ನು ಎದುರಿಸಬೇಕಾಗುತ್ತದೆ’ ಎಂದೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.‌
ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಗೂ ಅಮೆರಿಕಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ ಟ್ರಂಪ್, ʼಇರಾನ್ ಮತ್ತು ಇಸ್ರೇಲ್ ನಡುವೆ ಸುಲಭವಾಗಿ ಒಪ್ಪಂದ ಮಾಡಿಕೊಳ್ಳಬಹುದು ಮತ್ತು ಈ ಸಂಘರ್ಷವನ್ನು ಕೊನೆಗೊಳಿಸಬಹುದು’ ಎಂದು ಹೇಳಿದ್ದಾರೆ.
ʼಇರಾನ್‌ನ ಪರಿಸ್ಥಿತಿ ಕುರಿತಂತೆ ರಾಷ್ಟ್ರೀಯ ಭದ್ರತಾ ತಂಡದ ಜೊತೆ ಮಾತುಕತೆ ನಡೆಸಿದ್ದೇನೆ. ದಾಳಿಯಲ್ಲಿ ನಮ್ಮ ದೇಶದ ಯಾವುದೇ ಪಾತ್ರವಿಲ್ಲ. ಆದರೆ, ಇರಾನ್ ಮೇಲಿನ ದಾಳಿಗೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ ಬಳಸಿಕೊಂಡಿದೆ’ ಎಂದಿದ್ದಾರೆ.

Previous articleಕರಾವಳಿ ಭಾಗದಲ್ಲಿ ರೆಡ್ ಅಲರ್ಟ್
Next articleವಿಮಾನ ದುರಂತ: ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ