ನಮ್ಮ ರಾಜ್ಯದಲ್ಲಿನ ಆಸ್ತಿಯನ್ನು ಸರ್ಕಾರ ಕಾಪಾಡಲಿದೆ

0
21

ಕೇಂದ್ರ ಸಚಿವರು ಮಾತನಾಡುತ್ತಿಲ್ಲ. ಇಂದು ಸಂಜೆಯೊಳಗೆ ಎಲ್ಲರೂ ಮಾತನಾಡಬೇಕು

ಬೆಂಗಳೂರು: ಎಚ್ಎಎಲ್ ಸೇರಿದಂತೆ ಯಾವುದೇ ಸಾರ್ವಜನಿಕ ಉದ್ಯಮವನ್ನು ಸ್ಥಳಾಂತರಕ್ಕೆ ಅನುವು ಮಾಡಿಕೊಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಾವುದೇ ಸಾರ್ವಜನಿಕ ಉದ್ಯಮವನ್ನು ಸ್ಥಳಾಂತರ ಮಾಡಲು ಅವಕಾಶ ಮಾಡಿಕೊಡುವುದಿಲ್ಲ, ಎಚ್ಎಎಲ್ ಎರಡು ವಿಮಾನ ನಿಲ್ದಾಣಗಳನ್ನು ಹೊಂದಿದೆ. ಹೆಲಿಕಾಪ್ಟರ್ ಘಟಕವೂ ಕಾರ್ಯ ನಿರ್ವಹಿಸುತ್ತಿದೆ. ವಿಸ್ತರಣೆಗೆ ಅಗತ್ಯವಿದ್ದರೇ ಜಮೀನು ಸೇರಿದಂತೆ ಇನ್ನಿತರೆ ಮೂಲಸೌಲಭ್ಯವನ್ನು ನೀಡಲು ಸರ್ಕಾರ ಸಿದ್ಧವಿದೆ. ಹೀಗಾಗಿ ಎಚ್ಎಎಲ್ ಸೇರಿದಂತೆ ಯಾವುದೇ ಸಾರ್ವಜನಿಕ ಉದ್ಯಮವನ್ನು ಸ್ಥಳಾಂತರಕ್ಕೆ ಅನುವು ಮಾಡಿಕೊಡುವುದಿಲ್ಲ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಎಚ್ಎಎಲ್ ಸ್ಥಳಾಂತರಕ್ಕೆ ಮನವಿ ಮಾಡಿದ್ದಾರೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಅವರು, ಈ ಬಗ್ಗೆ ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರು ಪ್ರತಿಕ್ರಿಯೆ ನೀಡಲಿದ್ದಾರೆ. ಸರ್ಕಾರದ ವತಿಯಿಂದ ಎಚ್ಎಎಲ್ ಗೆ ಅಗತ್ಯ ಮೂಲಸೌಲಭ್ಯ ಒದಗಿಸಲಾಗುವುದು ಹೆಚ್ಎಎಲ್ ಅನ್ನು ಯಾವುದೇ ಬಿಜೆಪಿ ಸರ್ಕಾರ ನೀಡಿಲ್ಲ. ಮೊದಲಿನಿಂದಲೂ ನಮ್ಮಲಿರುವ ತಾಂತ್ರಿಕ, ಮಾನವ ಸಂಪನ್ಮೂಲದಿಂದ ನೆಹರೂ ಅವರು ಇದನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಏರ್ ಬೇಸ್, ಏರ್ ಶೋಗಳನ್ನು ನೀಡಿದ್ದಾರೆ. ಬೆಂಗಳೂರು, ಬೀದರ್ ಗಳಲ್ಲಿ ವಾಯುನೆಲೆ ಸ್ಥಾಪಿಸಲಾಗಿದೆ. ತುಮಕೂರಿನಲ್ಲಿ ಹೆಲಿಕಾಪ್ಟರ್ ವಿಭಾಗಕ್ಕೆ ಜಮೀನು ನೀಡಲಾಗಿದೆ. ಅವರು ಹೊಸದಾಗಿ ಏನಾದರೂ ಮಾಡಿಕೊಳ್ಳಲಿ. ನೆರೆ ರಾಜ್ಯಗಳಲ್ಲಿ ಏನು ಆಗಬಾರದು ಎಂಬ ಉದ್ದೇಶ ನಮ್ಮದಲ್ಲ. ನಮ್ಮ ರಾಜ್ಯದಲ್ಲಿನ ಆಸ್ತಿಯನ್ನು ನಮ್ಮ ಸರ್ಕಾರ ಕಾಪಾಡಲಿದೆ. ನಮ್ಮ ಆಸ್ತಿ, ನಮ್ಮ ನವರತ್ನಗಳು ಅವು. ಇವುಗಳನ್ನು ಉಳಿಸಿಕೊಳ್ಳುತ್ತೇವೆ. ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಏನು ಮಾಡುತ್ತಿದ್ದಾರೆ? ಕೇಂದ್ರ ಸಚಿವರು ಮಾತನಾಡುತ್ತಿಲ್ಲ. ಇಂದು ಸಂಜೆಯೊಳಗೆ ಎಲ್ಲರೂ ಮಾತನಾಡಬೇಕು ಎಂದು ಆಗ್ರಹಿಸಿದರು.

Previous articleಯುದ್ದ ವಿಮಾನ ನಿರ್ಮಾಣಕ್ಕೆ ರಾಜನಾಥ್​ ಸಿಂಗ್ ಅನುಮೋದನೆ
Next articleತಮಿಳಿನಿಂದ ಕನ್ನಡ ಹುಟ್ಟಿತು: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ