Home ಅಪರಾಧ ನರಗುಂದ ಬಳಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ಸಾವು, ಮಕ್ಕಳ ಸ್ಥಿತಿ ಗಂಭೀರ

ನರಗುಂದ ಬಳಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ಸಾವು, ಮಕ್ಕಳ ಸ್ಥಿತಿ ಗಂಭೀರ

0

ಹುಬ್ಬಳ್ಳಿ: ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಸಾವನ್ನಪ್ಪಿದ್ದಾರೆ‌. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ನರಗುಂದ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಕುಟುಂಬಸ್ಥರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ಲಾರಿ ಹುಬ್ಬಳ್ಳಿ ಕಡೆಗೆ ಹೊರಟಿತ್ತು, ಕಾರು ಬಾಗಲಕೋಟೆಗೆ ಹೊರಟಿತ್ತು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version