ಬೆಂಗಳೂರು: ಕೌರವ ಖ್ಯಾತಿಯ ಬಿ.ಸಿ ಪಾಟೀಲ್ ಅಭಿನಯಿಸಿರುವ ಸಿನಿಮಾದ ಟ್ರೇಲರ್ ಬಿಡುಗಡೆಯನ್ನು ನಟ ದರ್ಶನ್ ಅನಾವರಣಗೊಳಿಸಲಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ ಟ್ರೇಲರ್ ಬಿಡುಗಡೆಯ ಆಹ್ವಾನದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ರಾಣೆಬೆನ್ನೂರಿನ ನಗರಸಭೆ ಕ್ರೀಡಾಂಗನದಲ್ಲಿ ನ.೧ರಂದು ಸಂಜೆ 6 ಗಂಟೆಗೆ ಕರ್ನಾಟಕ ರಾಜ್ಯೋತ್ಸವದಂದು ಬಿಡುಗಡೆ ಕಾರ್ಯಕ್ರಮ ಆಯೋಜಿಸಿದೆ ಎಂದಿದ್ದಾರೆ ಟ್ರೇಲರ್‌ನ್ನು ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅನಾವರಣಗೊಳಿಸಲಿದ್ದಾರೆ.
ಸೌಮ್ಯ ಫಿಲ್ಮ್ಸ್ ಹಾಗೂ ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ಈ ಚಿತ್ರವನ್ನು ನಿರ್ಮಿಸಿದ್ದು, ಸೃಷ್ಟಿ ಪಾಟೀಲ್ ಕಾರ್ಯಕಾರಿ ನಿರ್ಮಾಪಕಿ. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರಕ್ಕೆ ವಿ. ಹರಿಕೃಷ್ಣ ಅವರ ಸುಮಧುರ ಸಂಗೀತ, ನಿರಂಜನ್ ಬಾಬು ಅವರ ಛಾಯಾಗ್ರಹಣ, ಕೌರವ ವೆಂಕಟೇಶ್ ಅವರ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನವಿದೆ. ಕನ್ನಡ ರಾಜ್ಯೋತ್ಸವದಂದು ಗರಡಿ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದ್ದು, ಬೆರಳೆಣಿಕೆ ದಿನಗಳ ಅಂತರದಲ್ಲಿ ಅಂದರೆ ನವೆಂಬರ್ 10ರಂದು ‘ಗರಡಿ’ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.