ನಾಗಮಂಗಲ ಗಲಭೆ: ಪೊಲೀಸ್ ಇನ್‌ಸ್ಪೆಕ್ಟರ್ ಅಮಾನತು

0
68

ಈ ರೀತಿ ಆಗಬಾರದಾಗಿತ್ತು ಅನ್ನೋದೇ ಒಂದು ದೊಡ್ಡ ಸ್ಟೇಟ್‌ಮೆಂಟ್‌ ಆಗಿದೆ. ನಮ್ಮ ಭಾಷೆ, ಕನ್ನಡ ಭಾಷೆ ಇವರಿಗೆ ಅರ್ಥ ಆಗೋದಿಲ್ವಾ? ನಾವು ಹಳ್ಳಿಯಿಂದ ಬಂದವರು. ಹಳ್ಳಿ ಭಾಷೆಯನ್ನ ಮಾತನಾಡಿದ್ದೇನೆ. ಟೆಕ್ಸ್ಟ ಬುಕ್ ಭಾಷೆ ಬಳಸುತ್ತೇವೆಯೇ?

ಬೆಂಗಳೂರು: ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌ ಅಶೋಕ್ ಕುಮಾರ್‌ನನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಘಟನೆಗಳಾದರೆ ನಿಮ್ಮನ್ನೆ ಹೊಣೆ ಮಾಡುವುದಾಗಿ ಪೊಲೀಸ್ ಅಧಿಕಾರಿಗಳಿಗೆ ಮೊದಲೇ ಎಚ್ಚರಿಸಿದ್ದೇವೆ. ಡಿವೈಎಸ್‌ಪಿ ಮೇಲೂ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಸೂಚಿಸಿದ್ದೇನೆ‌. ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು, ಯಾವುದೇ ಅಹಿತರ ಘಟನೆ ನಡೆಯದಂತೆ, ಮುನ್ನೆಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುತ್ತೇವೆ. ಯಾವ ಸರ್ಕಾರವೂ ಹೋಗಿ ಗಲಾಟೆ ಮಾಡಿ ಅಂತ ಹೇಳುತ್ತಾರೆಯೇ? ಈ ರೀತಿ ಆಗಬಾರದಾಗಿತ್ತು ಅಂತ ಹೇಳುವುದೇ ತಪ್ಪ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ಕನ್ನಡ ಭಾಷೆ ಅರ್ಥವಾಗುವುದಿಲ್ಲವೇ? ಯಾವುದೇ ಸಮುದಾಯವನ್ನು ತುಷ್ಟಿಕರಣ ಮಾಡುವ ಅಗತ್ಯತೆ ನಮಗೆ ಇಲ್ಲ. ಹೇಳಿಕೆಗಳನ್ನು ತಿರುಚಿ, ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡಿಕೊಂಡರೆ ನಾವೇನು ಮಾಡಲಾಗುವುದಿಲ್ಲ, ಬಿಜೆಪಿಯವರು ಹೇಳಿಕೆಗಳನ್ನು ಟ್ವಿಸ್ಟ್ ಮಾಡಿ ವ್ಯಾಖ್ಯಾನ ಮಾಡಿಕೊಳ್ಳಲಿ. ನಾನು ನಿನ್ನೆಯೇ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು‌ ವಿಪಕ್ಷದವರಿಗೆ ಮನವಿ ಮಾಡಿದ್ದೇನೆ. ಆದರೂ ರಾಜಕೀಯ ಮಾಡುತ್ತೇವೆ ಅನ್ನುವುದಾದರೆ ಮಾಡಲಿ. ಒಂದು ಮಾತನ್ನು ಸ್ಪಷ್ಟವಾಗಿ ಹೇಳಲಿಚ್ಛಿಸುತ್ತೇನೆ. ರಾಜ್ಯದಲ್ಲಿ ಯಾರು ಕೂಡ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ ಯಾರೇ ಆಗಿರಲಿ. ಗಣೇಶ ಹಬ್ಬ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಅನವಶ್ಯಕವಾಗಿ ಗೊಂದಲಗಳನ್ನು ಸೃಷ್ಟಿಸಿ, ಗಲಾಟೆ ಮಾಡಿದರೆ ಸುಮ್ಮನೆ ಬಿಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಏನೆಲ್ಲ‌ ಕ್ರಮ ತೆಗೆದುಕೊಳ್ಳಬೇಕೋ, ಕಟ್ಟುನಿಟ್ಟಾಗಿ ಮುಲಾಜಿಲ್ಲದೇ ಜರುಗಿಸುತ್ತೇವೆ ಎಂದರು.

Previous articleಸಮಾನ ಅವಕಾಶ ಸಿಕ್ಕಾಗ ಮಾತ್ರ ನಿಜವಾದ ಸ್ವಾತಂತ್ರ್ಯ
Next articleಮನನೊಂದು ಯುವಕ ಆತ್ಮಹತ್ಯೆ