Home ನಮ್ಮ ಜಿಲ್ಲೆ ಕಲಬುರಗಿ ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ

0

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈಗಾಗಲೇ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಹಿತಕರ ಘಟನೆಯಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ಬಯಲಿಗೆ ಬರಲಿದೆ ಎಂದರು.

ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧಿಸಿಲ್ಲ. ದೂರು ದಾಖಲಾದ ನಂತರ ಬಂಧನವಾಗಿದೆ. ಆದರೆ ಯಾದಗಿರಿ ಶಾಸಕರ ವಿರುದ್ದ ದೂರಿಗೂ ಇದಕ್ಕೂ ವ್ಯತ್ಯಾಸ ವಿದೆ ಎಂದರು.

Exit mobile version