ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆ ಬಗ್ಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ 5 ಜನರು ತಂಡವನ್ನು ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ನಡೆದ ದುರ್ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ಮಾಜಿ ಡಿಸಿಎಂ ಅಶ್ವಥ್ ನಾರಾಯಣ, ಶಾಸಕ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಪ್ರಮುಖರ ಸತ್ಯಶೋಧನಾ ತಂಡವು ಸಮಗ್ರ ವರದಿಯನ್ನು ಒಂದು ವಾರದೊಳಗೆ ನೀಡುವಂತೆ ನಿರ್ದೇಶನ ನೀಡಿದ್ದಾರೆ.