ಮಂಡ್ಯ: ನಾಗಮಂಗಲದಲ್ಲಿ ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸೆಪ್ಟೆಂಬರ್ 14ರ ಮಧ್ಯರಾತ್ರಿ 12 ಗಂಟೆಯವರೆಗೂ ಸೆಕ್ಷನ್ 144 ಜಾರಿಗೊಳಿಸಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇನ್ನು ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಸಂಘಟನೆ ಇಂದು ನಾಗಮಂಗಲ ಬಂದ್‌ಗೆ ಕರೆ ಕೊಟ್ಟಿದೆ.