Home ತಾಜಾ ಸುದ್ದಿ ನಾಗೇಂದ್ರ ರಾಜೀನಾಮೆ ಅಂಗೀಕಾರ

ನಾಗೇಂದ್ರ ರಾಜೀನಾಮೆ ಅಂಗೀಕಾರ

0

ಬೆಂಗಳೂರು: ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕಾರ ಮಾಡಿದ್ದಾರೆ.
ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಲು ಸಿಎಂ ಸಿದ್ದರಾಮಯ್ಯ ಅವರು ಶಿಫಾರಸು ಮಾಡಿದ್ದರು. ಸಿಎಂ ಸಿದ್ದರಾಮಯ್ಯ ಶಿಫಾರಸಿನ ಮೇರೆಗೆ ಬಿ.ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅನುಮೋದಿಸಿದ್ದು. ಹೀಗಾಗಿ ಭಾರತದ ಸಂವಿಧಾನದ 164 (1) ನೇ ವಿಧಿಯಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು, ನಾಗೇಂದ್ರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

Exit mobile version