ಬೆಂಗಳೂರು: ಹಿರಿಯ ನಟ ಪ್ರಕಾಶ್ ರೈ ಕರ್ನಾಟಕ ನಾಟಕ ಅಕಾಡೆಮಿ ಘೋಷಿಸಿದ್ದ ವಾರ್ಷಿಕ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.
ಪ್ರಕಾಶ್ ರೈ, ಹಿರಿಯ ನಟಿ ಉಮಾಶ್ರಿ ಸೇರಿದಂತೆ ೯೩ ಹಿರಿಯ ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟಿಸಿತ್ತು. ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಘೋಷಣೆ ಬೆನ್ನಲ್ಲೇ ತಮ್ಮ `ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ನಟ ಪ್ರಕಾಶ್ ರೈ, ನನ್ನ ಮನಃಸಾಕ್ಷಿ ಪ್ರಶಸ್ತಿ ಸ್ವೀಕಾರಕ್ಕೆ ಒಪ್ಪುತ್ತಿಲ್ಲ, ಕ್ಷಮಿಸಿ ಎಂದು ನಯವಾಗಿ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ನಾನು ಈಗಷ್ಟೆ ರಂಗಭೂಮಿಗೆ ಮರಳಿ ಬಂದಿದ್ದೇನೆ. ಮಾಡಬೇಕಾದ ಕೆಲಸ ಬೆಟ್ಟದಷ್ಟಿದೆ. ನನಗಿಂತಲೂ ಅರ್ಹರು ರಂಗಭೂಮಿಯಲ್ಲಿ ಇರುವುದರಿಂದ ಈ ಪುರಸ್ಕಾರವನ್ನು ಸ್ವೀಕರಿಸಲು ನನ್ನ ಮನಃಸಾಕ್ಷಿ ಒಪ್ಪುತ್ತಿಲ್ಲ. ಕ್ಷಮಿಸಿ ಅಭಿನಂದಿಸಿದ ಸಹೃದಯರಿಗೆ ಧನ್ಯವಾದಗಳು ಎಂದು ಪ್ರಕಾಶ್ ರಾಜ್ ತಿಳಿಸಿದ್ದಾರೆ.