ನಾಪತ್ತೆಯಾಗಿದ್ದ ನಗರಸಭಾ ಸದಸ್ಯನ ಶವ ಪತ್ತೆ

0
29

ಪುತ್ತೂರು: ಬಂಟ್ವಾಳದ ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಪುತ್ತೂರು ನಗರ ಪಾಲಿಕೆ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಶವ ಪತ್ತೆಯಾಗಿದೆ.
ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಎನ್ನಲಾಗಿತ್ತು. ಇಂದು ಬೆಳಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿದ್ದು ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ, ಸ್ಥಳದಲ್ಲಿ ಸಿಕ್ಕಿದ ಮೊಬೈಲ್‌ನಿಂದ ನಂಬರ್ ಪಡೆದು ಪೋನ್ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಅವರದು ಎಂದು ತಿಳಿದಿದ್ದು, ಮನೆಯವರಿಗೆ ಮಾಹಿತಿ ನೀಡಲಾಗಿದೆ. ಇದೀಗ ಸ್ಥಳದಲ್ಲಿ ರಮೇಶ್ ರೈ ಅವರ ಕುಟುಂಬದ ಸದಸ್ಯರು ಪೋಲೀಸರು ಹಾಗೂ ಸ್ಥಳೀಯರು ಜಮಾಯಿಸಿದ್ದು ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳೀಯರ ಹಾಗೂ ಈಜುಪಟುಗಳ ನೆರವಿನಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಆದರೆ, ಸಾವಿಗೆ ಕಾರಣ ನಿಗೂಢವಾಗಿದೆ. ಅವರು ಇತ್ತೀಚಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.

Previous articleಬಜರಂಗದಳದ ಕಾರ್ಯಕರ್ತನ ವಶಕ್ಕೆ ಪಡೆದ ಪೊಲೀಸರು
Next articleವಿಶ್ವ ಪರಿಸರ ದಿನಾಚರಣೆ: ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ