Home ತಾಜಾ ಸುದ್ದಿ ನಾಮಪತ್ರ ಸಲ್ಲಿಸಿದ ವಿನೋದ ಅಸೂಟಿ

ನಾಮಪತ್ರ ಸಲ್ಲಿಸಿದ ವಿನೋದ ಅಸೂಟಿ

0

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆದ್ ಅಭ್ಯರ್ಥಿ ವಿನೋದ ಅಸೂಟಿ ಅವರು ಮಂಗಳವಾರ ನಾಮ ಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆದ ದಿವ್ಯ ಪ್ರಭು ಅವರಿಗೆ ಅಸೂಟಿ ಉಮೇದುವಾರಿಕೆ ಸಲ್ಲಿಸಿದ್ದು, ಸಚಿವ ಸಂತೋಷ ಲಾಡ್, ಎಂಎಲ್‌ಸಿ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ ಸಾಥ್ ನೀಡಿದರು.

ಸಾಂಕೇತಿಕ ನಾಮಪತ್ರ ಸಲ್ಲಿಕೆಯ ಬಳಿಕ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯ ಮೂಲಕ ಸಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

Exit mobile version