ನಾಯಿ ಜತೆ ಅಸಭ್ಯ ವರ್ತನೆ: ಆರೋಪಿ ಬಂಧನ

0
19
ಬಂಧನ

ಚಿಕ್ಕಮಗಳೂರು: ಬೀದಿನಾಯಿ ಜತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿರುವ ಆರೋಪದಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕು ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಕಟ್ಟೆಮನೆಯ ಶಿವರಾಜ ಎಂಬಾತನ್ನು ಬಂಧಿಸಲಾಗಿದೆ. ಬೀದಿ ನಾಯಿಯ ಜತೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವುದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಅಕ್ಟೋಬರ್ ೧೮ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಜಯಪುರ, ಕೊಪ್ಪ ಭಾಗದಲ್ಲಿ ಭಾರೀ ವೈರಲ್ ಆಗಿತ್ತು. ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ನೀಡಿದ ಮಾಹಿತಿ ಆಧಾರದಲ್ಲಿ ಜಯಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಶಿವರಾಜನನ್ನು ಬಂಧಿಸಿದ್ದಾರೆ.

Previous articleಸರ್ಕಾರದ ಒತ್ತಡಕ್ಕೆ ಮಣಿದು ಹಾವೇರಿ ಎಸ್ಪಿ ಹೇಳಿಕೆ ಬದಲು
Next articleಜಮೀರ್‌ಗೆ ಮಸಿ ಬಳಿದರೆ ೧ ಲಕ್ಷ ರೂ. ಬಹುಮಾನ