ನವದೆಹಲಿ: ನಾಲ್ಕು ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ಭಾನುವಾರ ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಅವರು ಟ್ವಿಟರ್‌ನಲ್ಲಿ ಹೊಸ ನೇಮಕಾತಿಗಳನ್ನು ಪ್ರಕಟಿಸಿದ್ದಾರೆ. ಭಾರತದ ಸಂವಿಧಾನದ ಅಡಿಯಲ್ಲಿ ಸಂಬಂಧಿತ ನಿಬಂಧನೆಗಳ ಪ್ರಕಾರ ಕೆಳಗಿನ ನ್ಯಾಯಾಧೀಶರನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ. ಅವರೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ! ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.