Home ತಾಜಾ ಸುದ್ದಿ ನಾಳೆ ಚುನಾವಣೆ ವೇಳಾಪಟ್ಟಿ ಪ್ರಕಟ

ನಾಳೆ ಚುನಾವಣೆ ವೇಳಾಪಟ್ಟಿ ಪ್ರಕಟ

0

ನವದೆಹಲಿ: ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಾಳೆ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.
ರಾಜಧಾನಿ ದಿಲ್ಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸುವುದಾಗಿ ಚುನಾವಣಾ ಆಯೋಗ ನಡೆಸಲಿದ್ದು, ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆಗೆ ನಡೆಯಲಿರುವ ಚುನಾವಣೆಯ ವೇಳಾ ಪಟ್ಟಿಯನ್ನು ಬಹಿರಂಗಪಡಿಸಲಿದೆ. ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಏಪ್ರಿಲ್/ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಚುನಾವಣಾ ಆಯೋಗದ ಸುದ್ದಿಗೋಷ್ಠಿಯು ಆಯೋಗದ ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರವಾಗಲಿದೆ

Exit mobile version