ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

0
24

ಬೆಂಗಳೂರು: ನಾಳೆ ನೇರಳೆಯ ಕೆಲ ಮಾರ್ಗದಲ್ಲಿ ಕೆಲ ಕಾಲ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ನಮ್ಮ ಮೇಟ್ರೋ ತಿಳಿಸಿದೆ.
ಮಾರ್ಚ್ 9ರಂದು ಭಾನುವಾರ ಬೆಳಿಗ್ಗೆ 7 ರಿಂದ 10 ಗಂಟೆಯವರೆಗೆ ಬೆಂಗಳೂರಿನ ನೇರಳೆ ಮಾರ್ಗದ ಹಳಿ ನಿರ್ವಹಣಾ ಕಾರ್ಯಕ್ಕಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್​​ ಸಿಎಲ್​ ತಿಳಿಸಿದೆ. ನಮ್ಮ ಮೆಟ್ರೋ ನಿಗಮವು ಅಂದು ನೇರಳ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಬೆಳಿಗೆ 07:00 ರಿಂದ 10:00 ಗಂಟೆಯವರೆಗೆ ಕೈಗೊಳ್ಳಲಿದ್ದು. ಈ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ಯಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ರದ್ದುಪಡಿಸಲಾಗುತ್ತದೆ, ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸ‌ರ್.ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣಗಳು ಮುಚ್ಚಲಾಗಿರುತ್ತದೆ ಎಂದು ತಿಳಿಸಿದೆ.

Previous articleKSRTC ಬಸ್‌ನಲ್ಲೇ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ
Next articleಸವದತ್ತಿ ಯಲ್ಲಮ್ಮ ದೇವಿಯ ದರ್ಶನ ಪಡೆದ ಸಿ.ಟಿ.ರವಿ