ಇಂದು ಬೆಳಗಾವಿಗೆ ಉಪ ರಾಷ್ಟ್ರಪತಿ ಧನಕರ್ ದಂಪತಿ ಆಗಮನ

0
15

ಬೆಳಗಾವಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸುದೇಶ್ ಧನಕರ್ ಇಂದು ಮೇ ೨೭ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಳಗಾವಿ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಬೆಳಗಾವಿಯಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್-ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರಡಿಷನಲ್ ಮೆಡಿಸಿನ್(ಎನ್‌ಐಟಿಎಂ) ಸಂಸ್ಥಾಪನಾ ದಿನ ಮತ್ತು ಬೆಳಗಾವಿಯ ಕೆಎಲ್‌ಇ ವಿಶ್ವವಿದ್ಯಾಲಯದ ೧೪ನೇ ಘಟಿಕೋತ್ಸವದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಳಿಕ ಧನಕರ್ ದಂಪತಿ ಬೆಂಗಳೂರಿಗೆ ತೆರಳಲಿದ್ದಾರೆ.

Previous articleರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ
Next articleಆದಿಲ್ ಪ್ರಕರಣ ಸಿಐಡಿಗೆ ವರ್ಗಾವಣೆ ಸಾಧ್ಯತೆ: ಎಸ್ಪಿ