ನಾವು ಕೋರ್ಟ್ ಮೆಟ್ಟಿಲು ಹತ್ತದೆ ಇದ್ರೆ ಪರಿಹಾರ ಬರುತ್ತಿರಲಿಲ್ಲ

0
13

ಬೆಂಗಳೂರು: ನಾವು ಕೋರ್ಟ್ ಮೆಟ್ಟಿಲು ಹತ್ತದೆ ಇದ್ರೆ ಪರಿಹಾರ ಬರುತ್ತಿರಲಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಬೆಂಗಳೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿರುವ ಅವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಕೇಂದ್ರ ಸರ್ಕಾರದ ಜೊತೆ ಮಾತುಕತೆ ಮಾಡಿದ್ದೇವೆ. ಆದರೆ ಯಾವುದೇ ಅಧಿಕೃತ ದೃಢೀಕರಣ ಆಗಿಲ್ಲ. ನಾವು ಅಧಿಕೃತ ಆದೇಶದ ನೀರಿಕ್ಷೇಯಲ್ಲಿದ್ದೇವೆ, ನಾವು 18,172 ಕೋಟಿಗೆ ಮನವಿ ಸಲ್ಲಿಸಿದ್ದೆವು. ಸಮಸ್ಯೆ ಗಂಭೀರವಾಗಿರುವ ಆಧಾರದ ಮೇಲೆ ಪರಿಹಾರ ಕೇಳಿದ್ದೆವು. ಈಗ 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ. ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ ನಮಗೆ ಹೋರಾಟ ಮೂಲಕ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಸಿಕ್ಕಿದೆ, ಕೇಂದ್ರ ಸರಕಾರ ರಾಜ್ಯಕ್ಕೆ ಪರಿಹಾರ ಕೊಡುವ ಮನಸ್ಸು ಇರಲಿಲ್ಲ. ರಾಜ್ಯಕ್ಕೆ ವಂಚನೆ ಆಗುತ್ತಲೆ ಇತ್ತು ಆದ್ದರಿಂದ ನಾವು ಜನರ ಪರವಾಗಿ ಹೋರಾಟ ಮಾಡಿದ್ವಿ ನಾವು ಕೋರ್ಟ್ ಮೆಟ್ಟಿಲು ಹತ್ತದೆ ಇದ್ರೆ ಪರಿಹಾರ ಬರುತ್ತಿರಲಿಲ್ಲ ಎಂದರು. ಕೇಂದ್ರ ಸರ್ಕಾರದ ಹಣ ಬಂದ ಕೂಡಲೇ ರೈತರಿಗೆ ನೇರವಾಗಿ ಅಕೌಂಟ್ ಮೂಲಕ ಹಣ ಹಾಕುತ್ತೇವೆ. ಸೋಮವಾರ ಮತ್ತೆ ಕೋರ್ಟ್ ಕೇಸ್ ಇದೆ. ಕೇಂದ್ರ ಸರ್ಕಾರ ಮಾಹಿತಿ ಕೋರ್ಟ್ ಗೆ ಕೊಡಬೇಕು. ಆ ವೇಳೆ ನಾವು ಪ್ರಶ್ನೆ ಮಾಡುತ್ತೇವೆ. ಕೋರ್ಟ್ ನಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಹೇಳಿದರು.

Previous articleಬರ ಪರಿಹಾರ: ಇದು ಬಹಳ ಕಡಿಮೆ ಮೊತ್ತ
Next articleಫಸ್ಟ್ ಕ್ಲಾಸ್ ಸಿಟಿಯಲ್ಲಿ ಸೆಕೆಂಡ್ ಕ್ಲಾಸ್ ಮತದಾನ: ಅನಿಸಿಕೆ ಹಂಚಿಕೊಂಡ ಶಾಸಕ ಸುರೇಶ್ ಕುಮಾರ್