ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ವೈದ್ಯ ಸಾವು

0
20

ಬೆಳಗಾವಿ: ರಸ್ತೆ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವೈದ್ಯ ಹಾಗೂ ಇಬ್ಬರು ಪದವೀಧರರು ಗಾಯಗೊಂಡ ಘಟನೆ ನಡೆದಿದೆ.
ಬೆಳಗಾವಿ ಯಡಿಯೂರಪ್ಪ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ವೈದ್ಯರನ್ನು ಜಮಖಂಡಿಯ ಸೌರಭ ಕಾಂಬಳೆ(೨೫) ಎಂದು ಗುರುತಿಸಲಾಗಿದೆ. ಜಮಖಂಡಿಯ ಗಿರೀಶ ಕರೆಮ್ಮನವರ(೨೫), ಚೇತನ ಧರಿಗೌಡರ (೨೫) ಗಂಭೀರವಾಗಿ ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಂಗಳವಾರ ತಡರಾತ್ರಿ ಪಾರ್ಟಿ ಮುಗಿಸಿಕೊಂಡು ಮೂವರು ಗೆಳೆಯರು ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

Previous articleರಾಜ್ಯದಲ್ಲಿ ಮತ್ತಷ್ಟು ಜಪಾನ್ ಹೂಡಿಕೆ
Next articleನಾವು ಹಿಂದೂಗಳಲ್ಲ