ನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ

0
11

ರಾಯಚೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಿದ್ದೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನಲ್ಲಿ ನಡೆದಿದೆ.
ನಿನ್ನೆ ಏಕಾಏಕಿ ಕಚೇರಿಯಿಂದ ಒಂದು ದಿನದ ಮಟ್ಟಿಗೆ ರಜೆ ಪಡೆದಿದು ಮನೆಗೆ ಬಂದಿದ್ದ ಮೌನೇಶ್, ಮನೆಯಲ್ಲೇ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಲಿಂಗಸಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Previous articleಖಾಸಗಿ ಬಸ್‌ ಲಾರಿ ನಡುವೆ ಅಪಘಾತ: ಓರ್ವ ಸಾವು
Next articleರೆಪೋ ದರ ಯಥಾಸ್ಥಿತಿ ಮುಂದುವರಿಸಿದ ಆರ್​ಬಿಐ