Home ಅಪರಾಧ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

0

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಮೃತರನ್ನು 30 ವರ್ಷದ ಉತ್ನಾಳದ ಬೀರಪ್ಪ ಗೋಡೆಕರ್, 25 ವರ್ಷದ ಹಣಮಂತ ಕಡ್ಲಿಮಟ್ಟಿ ಮತ್ತು ಜುಮನಾಳ ಗ್ರಾಮದ 19 ವರ್ಷದ ಯಮನಪ್ಪ ನಾಟೀಕಾರ್ ಎಂದು ಗುರುತಿಸಲಾಗಿದೆ. ಶವಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದಲ್ಲಿ ಉಮೇಶ್ ಭಜಂತ್ರಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ‍ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version