Home ನಮ್ಮ ಜಿಲ್ಲೆ ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ

ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ

0

ಬೆಂಗಳೂರು: ರಾಜ್ಯ ಸರ್ಕಾರ ಇದ್ದೂ ಸತ್ತಂತಾಗಿದ್ದು, ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ರಾಜ್ಯದಲ್ಲಿ ಹೆಣ್ಣು ಮಕ್ಕಳ ಬ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೇಗೊಳಿಸಿ ದೌರ್ಜನ್ಯ ಮಾಡಲಾಗಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ದಲಿತ ಶಾಲಾ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಚ ಮಾಡಲು ಬಳಕೆ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರೀಯವಾಗಿದೆ. ಯಾರಿಗೂ ಭಯ ಇಲ್ಲ. ಸರ್ಕಾರ ಅಧಿಕಾರಿಗಳ ಮೇಲೆ ಸಂಪೂರ್ಣ ಹಿಡಿತ ಕಳೆದು ಕೊಂಡಿದೆ. ಇಲ್ಲಿ ಮಹಿಳೆಯರು, ಮಕ್ಕಳು, ದಲಿತರಿಗೆ ಸುರಕ್ಷತೆ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಇದ್ದೂ ಸತ್ತಂತಾಗಿದ್ದು, ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿ ಶಾಪ ಹಾಕುವಂತಾಗಿದೆ ಎಂದು ಬರೆದುಕೊಂಡಿದ್ದಾರೆ.

Exit mobile version