ಬೆಂಗಳೂರು: ನಿರ್ಭೀತ ಧ್ವನಿಯೊಂದನ್ನು ನಾಡು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.