ಬೆಂಗಳೂರು: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿರುವ ಘಟನೆ ರಾಜಧಾನಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡ ಏಕಾಏಕಿ ಕುಸಿದಿದ್ದು ಅವಶೇಷಗಳ ಅಡಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆದಿದೆ.